ಕ್ರೀಡೆ
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Views: 3
ಕುಂದಾಪುರ: ಹೆಮ್ಮಾಡಿ ಪದವಿ ಪೂರ್ವ ಕಾಲೇಜು, ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 30/9/2024 ರಂದು ಆಯೋಜಿಸಿದ ಪದವಿ ಪೂರ್ವ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಾಗರಾಜ್ ಹಾಗೂ ಯೋಗೀಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.







