ಕರಾವಳಿ

ಕುಂದಾಪುರ: ಬೇಳೂರು ಸಮೀಪ ಚಲಿಸುತ್ತಿರುವ ರೈಲಿನಿಂದ ಆಯಾತಪ್ಪಿ ಗದ್ದೆಗೆ ಉರುಳಿ ಬಿದ್ದ ವ್ಯಕ್ತಿ ಗಂಭೀರ 

Views: 546

ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬೇಳೂರು  ಕಂಬಳಗದ್ದೆ ಸಮೀಪ ಕೊಂಕಣ ರೈಲ್ವೆ ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವ ಆಯಾತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ರೈಲ್ವೆ ಪ್ರಯಾಣಿಕನೋರ್ವ ಆಯಾತಪ್ಪಿ ಗದ್ದೆಗೆ ಉರುಳಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು  ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ನೋಡಿದ ಸ್ಥಳೀಯ ಮಹಿಳೆಯೋರ್ವರು ತತ್‌ಕ್ಷಣವೇ ಇಲ್ಲಿನ ಸ್ಥಳೀಯರಿಗೆ ಮಾಹಿತಿ ನೀಡಿದರು. ಅವರು ತನ್ನ ಸ್ನೇಹಿತರೊಂದಿಗೆ ತತ್‌ಕ್ಷಣವೇ ಸ್ಥಳಕ್ಕೆ ಧಾವಿಸಿ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಗಂಭೀರ ಗಾಯಗೊಂಡ ವ್ಯಕ್ತಿ ಉತ್ತರ ಭಾರತ ಮೂಲದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button
error: Content is protected !!