ಶಿಕ್ಷಣ
ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Views: 358
ಕುಂದಾಪುರ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಂಸ್ಥೆಯಲ್ಲಿ ಅಕ್ಟೋಬರ್ ೦2 ರಂದು ಬೆಳಿಗ್ಗೆ ಮಹಾತ್ಮ ಗಾಂಧೀಜಿಯವರ ಜನ್ಮದಿನ ಆಚರಿಸಲಾಯಿತು.
ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಾಲಾ ಪ್ರಾಂಶುಪಾಲರಾದ ಮಮತಾ ಪೂಜಾರಿ ಅವರು ಗಾಂಧೀಜಿಯವರ ಬಗ್ಗೆ ಮಾತನಾಡಿ, ಗಾಂಧೀಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಸಹ ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ವೈಷ್ಣವಿ ವಂದಿಸಿದರು.