ಶಿಕ್ಷಣ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್:ಗಾಂಧಿ ಜಯಂತಿ ಆಚರಣೆ

Views: 508

ಕಿರಿಮುಂಜೇಶ್ವರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಾಂಧಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಶಿಕ್ಷಕರಾದ ದೀಪಿಕಾ ಹಾಗೂ ರಾಘವೇಂದ್ರ ಇವರು ಗಾಂಧೀಜಿ ಮತ್ತು ಶಾಸ್ತ್ರಿಯವರ ಜೀವನ ಸಾಧನೆಗಳನ್ನು ಸ್ಮರಿಸಿಕೊಂಡರು.

ಸಭೆಯ ಅಧ್ಯಕ್ಷತೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ವಹಿಸಿಕೊಂಡು ಪ್ರತಿಯೊಬ್ಬರು ತಮ್ಮಲ್ಲಿರುವ ಸಾಮರ್ಥ್ಯವನ್ನು ಬಳಸಿಕೊಂಡು ಸ್ವಾಭಿಮಾನಿಯಾಗಿ ಬದುಕಬೇಕು.ಸರಿಯಾದ ಯೋಜನೆಯನ್ನು ಹಾಗೂ ಉತ್ತಮವಾದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಗುರಿ ಮುಟ್ಟಲು ಸಾಧ್ಯ ಎಂದರು.

ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಬೋಧಕ ಮತ್ತು ಬೋಧಿಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ಶ್ರೀಮತಿ ಆಶಾಲತಾ ವಂದಿಸಿ, ರಕ್ಷಾ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button