ಶಿಕ್ಷಣ
ಮದರ್ ತೆರೇಸಾ ಸ್ಕೂಲ್: ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ

Views: 418
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಮಹಾತ್ಮಗಾಂಧೀಜಿಯವರ 155ನೇ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ಜನ್ಮದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮ ಶಾಲಾ ಆವರಣ ಸ್ವಚ್ಛತೆಯೊಂದಿಗೆ ಆರಂಭಗೊಂಡಿತು. ಮಹಾನ್ ಚೇತನರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಲಾಯಿತು. ಎಲ್ಲರೂ ಸಾಮೂಹಿಕವಾಗಿ ಸರ್ವಧರ್ಮ ಪ್ರಾರ್ಥನೆ ಮತ್ತು ಭಜನೆಯಲ್ಲಿ ಪಾಲ್ಗೊಂಡರು ಸಭೆಯಲ್ಲಿ ಆಡಳಿತ ಮಂಡಳಿ ಅಧಿಕಾರಿ ಕುಮಾರಿ ರೆನಿಟಾ ಲೋಬೊ,ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ವಿದ್ಯಾರ್ಥಿಗಳು,ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು