ಯುವಜನ
ಬೆಳ್ತಂಗಡಿ: ತಲೆ ಮೇಲೆ ದಾರಂದ ಬಿದ್ದು 1ನೇ ತರಗತಿ ಬಾಲಕಿ ಸಾವು

Views: 105
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ತಲೆ ಮೇಲೆ ದಾರಂದ ಬಿದ್ದು 1ನೇ ತರಗತಿ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ಬಾಲಕಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಎಂದು ತಿಳಿಯಲಾಗಿದೆ.
ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು.
ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ






