ರಾಜಕೀಯ
ಅಕ್ಟೋಬರ್ 7, 9 ರಂದು 2ಕಂತಿನ ಗೃಹ ಲಕ್ಷ್ಮೀ ಹಣ ಬಿಡುಗಡೆ:ಲಕ್ಷ್ಮೀ ಹೆಬ್ಬಾಳ್ಕರ್

Views: 43
ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಕಂತಿನ ಹಣ ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಾಲ್ಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಸರಾ ಹಬ್ಬದ ವೇಳೆ ಎರಡು ಕಂತಿನ ಹಣ ನಿಮಗೆಲ್ಲ ಸಿಗಲಿದೆ. ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದರು.
ಲಕ್ಷ್ಮೀ ಹೆಬ್ಬಾಳ್ಕರ್ ತಾವು ಹಿಡಿದ ಕೆಲಸ ಮಾಡದೇ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಹಾಗಾಗಿ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ. ಪಟ್ಟು ಹಿಡಿದು ಈ ಯೋಜನೆ ಆರಂಭಿಸಿದ್ದೇನೆ. ಇದನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ತಿಳಿಸಿದರು.
.-






