ರಾಜಕೀಯ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ :ದೂರು

Views: 73

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆ.

ಶ್ರೀಕೋಟಾ ಶ್ರೀನಿವಾಸ ಪೂಜಾರಿಯವರ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ಅವರ ಫೋಟೋ ಹಾಗೂ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡು ದುರುದ್ದೇಶ ಪೂರಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಉದ್ದೇಶದಿಂದ ಕೋಟ ಶ್ರೀನಿವಾಸ್ ಪೂಜಾರಿ ಹೆಸರನ್ನು ಕೆಡಿಸುವ ಉದ್ದೇಶದಿಂದ ನಕಲಿ ಖಾತೆಗಳನ್ನು ತೆರೆದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಕೋರಲಾಗಿದೆ.

Related Articles

Back to top button
error: Content is protected !!