ಶಿಕ್ಷಣ

ಆರ್.ಎನ್.‌ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜು ಕುಂದಾಪುರ: ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Views: 283

ಉಡುಪಿ ಜಿಲ್ಲಾ‌ಮಟ್ಟದಲ್ಲಿ ನಡೆದ ಪದವಿ ಪೂರ್ವ ಕಾಲೇಜು ಮಟ್ಟದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಮಹಮ್ಮದ್ ಅನಸ್, ಬಾಲಕಿಯರ ಫುಟ್ ಬಾಲ್ ಪಂದ್ಯಾಟದಲ್ಲಿ ಪ್ರಥಮ‌ ಪಿ.ಯು.ಸಿ ವಾಣಿಜ್ಯ ವಿಭಾಗದ ಸಪ್ತಮಿ ಶೆಟ್ಟಿ, ಶಿವಮೊಗ್ಗದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ಮಿಥುನ್, ಉಡುಪಿ ಜಿಲ್ಲಾಮಟ್ಟದ ಟೇಬಲ್ ಟೆನಿಸ್ ನಲ್ಲಿ ವಿಜೇತರಾದ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ದೀಪ್ತಿ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಕ್ಷಮಾ‌ಗೌತಮ್ ಮತ್ತು ಅಂಕಿತಾ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಾಧನೆಗೈದ ವಿದ್ಯಾರ್ಥಿಗಳಿಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್.ಸುಕುಮಾರ್ ಶಟ್ಟಿಯವರು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು‌ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಅಭಿನಂದನೆ ಸಲ್ಲಿಸಿರುತ್ತಾರೆ.

Related Articles

Back to top button