ಯುವಜನ
ಉಡುಪಿ: ಬೈಕಿಗೆ ಕಾರು ಢಿಕ್ಕಿ, ಕಾಲೇಜು ವಿದ್ಯಾರ್ಥಿ ಸಾವು

Views: 103
ಉಡುಪಿ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಉಡುಪಿ ಎಂಜಿಎಂ ಕಾಲೇಜು ಹತ್ತಿರ ನಡೆದಿದೆ.
ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಪದವಿ ಕಾಲೇಜಿನ ವಿದ್ಯಾರ್ಥಿ ವೀರಜ್(18) ಎಂದು ತಿಳಿದುಬಂದಿದೆ.
ಉಡುಪಿ ಕಡೆಯಿಂದ ಎಂ.ಜಿ.ಎಂ ಡೈವರ್ಶನ್ ಲ್ಲಿ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕಿಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಉಡುಪಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.






