ಯುವಜನ
ಸಿಗಂದೂರಿಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಪಲ್ಟಿ; ಓರ್ವ ಸಾವು,ನಾಲ್ವರು ಗಂಭೀರ

Views: 129
ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃತಪಟ್ಟಿದ್ದಾನೆ. ನೆಲಮಂಗಲದ ಚಂದನ್ (26) ಮೃತ ಯುವಕ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪಲ್ಟಿಯಾಗಿದೆ. ಕೊಡಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್, ಮಂಡ್ಯದ ಯೋಗೇಶ್ ಎಂಬವರಿಗೆ ಗಂಭೀರ ಗಾಯವಾಗಿದೆ.
ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದರು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.






