ರೇಣುಕಾಸ್ವಾಮಿ ಕೊಲೆ ಪ್ರಕರಣ:5 ಆರೋಪಿಗಳಿಗೆ ಜಾಮೀನು, ದರ್ಶನ್ಗೆ ಜೈಲೇ ಗತಿ..!

Views: 86
ಕನ್ನಡ ಕರಾವಳಿ ಸುದ್ಧಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಬಿಗ್ ಶಾಕ್ ಆಗಿದೆ.

ರೇಣುಕಾಸ್ವಾಮಿ ವಿರುದ್ಧ ನಟಿ ಪವಿತ್ರಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ ಇತ್ತು. ಇದೇ ಕಾರಣಕ್ಕೆ ಕಳೆದ ಜೂನ್ ನಲ್ಲಿ ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿತ್ತು. ಈ ವೇಳೆ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ್ದ ಮಾರಣಾಂತಿಕ ಹಲ್ಲೆಗೆ ರೇಣುಕಾಸ್ವಾಮಿ ಜೀವ ಕಳೆದುಕೊಂಡಿದ್ದರು ಎಂಬ ಆರೋಪ ಇತ್ತು. ಇದರ ತನಿಖೆ ನಡೆಸಿದ್ದ ಬೆಂಗಳೂರು ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು, 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಬೆಂಗಳೂರಿನ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.17 ಆರೋಪಿಗಳಲ್ಲಿ ಇಲ್ಲಿಯವರೆಗೆ 5 ಜನಕ್ಕೆ ಮಾತ್ರ ಕೋರ್ಟ್ ಜಾಮೀನು ನೀಡಿದೆ. ಅವರಲ್ಲಿ ರವಿಶಂಕರ್, ದೀಪಕ್ ಕುಮಾರ್ ಕಾರ್ತಿಕ್, ನಿಖಿಲ್, ಕೇಶವ ಮೂರ್ತಿ ಕೋರ್ಟಿನಿಂದ ಜಾಮೀನು ಸಿಕ್ಕಿದೆ.






