ಶಿಕ್ಷಣ

BREAKING; ಈ ವರ್ಷದಿಂದ 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ! 

Views: 164

ಕನ್ನಡ ಕರಾವಳಿ ಸುದ್ದಿ: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024–25ನೇ ಶೈಕ್ಷಣಿಕ ಸಾಲಿನಿಂದ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ–1 ಮತ್ತು ಭಾಗ–2ರ ಆಧಾರದಲ್ಲಿ ಮೌಲ್ಯಾಂಕನ ಪೂರ್ಣಗೊಳಿಸಲು ಎಲ್ಲ ಶಾಲೆಗಳಿಗೂ ಸುತ್ತೋಲೆ ಕಳುಹಿಸಲಾಗುತ್ತಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್‌ ಸಿಂಗ್ ಹೇಳಿದ್ದಾರೆ.

 

Related Articles

Back to top button