ಸಾಂಸ್ಕೃತಿಕ

ಮತ್ತೆ ಜೈಲು ಪಾಲಾದ ಬಿಗ್‌ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ !.. ಮುಂದೇನು?

Views: 410

ಕನ್ನಡ ಕರಾವಳಿ ಸುದ್ಧಿ: ಬಿಗ್ ರಿಯಾಲಿಟಿ ಶೋ ಬಿಗ್‌ಬಾಸ್  ಸೀಸನ್ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್‌ಬಾಸ್  ಮನೆಯ ಜೈಲು ಪಾಲಾಗಿದ್ದಾರೆ. ಬಿಗ್‌ಬಾಸ್ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ ಕೊಟ್ಟಿದ್ದರು.

ಬಿಗ್‌ಬಾಸ್ ಸೀಸನ್ 11ರಲ್ಲಿ ಚೈತ್ರಾ ಕುಂದಾಪುರ ಅವರು ಜೈಲಿಗೆ ಹೋಗಿದ್ದಾರೆ. ಮೂರನೇ ವಾರದಲ್ಲಿ ಮನೆಯಲ್ಲಿದ್ದ 14 ಸ್ಪರ್ಧಿಗಳಿಗೆ ಬಿಗ್‌ಬಾಸ್ ಟಾಸ್ಕ್ವೊಂದನ್ನು ನೀಡಿದ್ದರು. ಬಿಗ್ಬಾಸ್ ಮನೆಯಲ್ಲಿ ಅಪ್ರಾಮಾಣಿಕ ಯಾರು ಹಾಗೂ ಕುತಂತ್ರಿ ಯಾರು ಅಂತ ಹೇಳಿ ಎಂದಿದ್ದರು.

ಬಿಗ್‌ಬಾಸ್  ಮನೆಯಲ್ಲಿರೋ ಸ್ಪರ್ಧಿಗಳು ಅತಿ ಹೆಚ್ಚಾಗಿ ಹಣೆ ಪಟ್ಟಿಯನ್ನು ಚೈತ್ರಾ ಕುಂದಾಪುರ ಅವರಿಗೆ ಕೊಟ್ಟಿದ್ದಾರೆ. ಹೀಗಾಗಿ ಪ್ರಕ್ರಿಯೆಯ ಅನುಸಾರ ಚೈತ್ರಾ ಕುಂದಾಪುರ ಬಿಗ್‌ಬಾಸ್ ಜೈಲಿಗೆ ಹೋಗಿದ್ದಾರೆ. ಬಿಗ್‌ಬಾಸ್  ಅವರ ಮುಂದಿನ ಆದೇಶದವರೆಗೂ ಚೈತ್ರಾ ಜೈಲಿನಲ್ಲೇ ಇರಬೇಕಾಗುತ್ತದೆ.

Related Articles

Back to top button
error: Content is protected !!