ಇತರೆ

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

Views: 22

ಕುಂದಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಬೆಂಗಳೂರು,ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್.ಜಾಲಪ್ಪ ಕ್ಯಾಂಪಸ್ ಕೊಡಿಗೇಹಳ್ಳಿ ದೊಡ್ಡಬಳ್ಳಾಪುರಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನುಪ್ರತಿನಿಧಿಸಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Back to top button
error: Content is protected !!