ಧಾರ್ಮಿಕ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಬ್ರಹ್ಮಕಲಶೋತ್ಸವ ಹಾಗೂ ರಥೋತ್ಸವ

Views: 1
ಕುಂದಾಪುರ : ಮೇ 07 ರಿಂದ ಮೇ 11 ರ ವರೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ರಥೋತ್ಸವ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮೇ. 07 ರಂದು ಸಂಜೆ 5 ಗಂಟೆಗೆ ಮೂಡುಬಿದಿರೆ ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಖ್ಯಾತ ಹಿನ್ನಲೆ ಗಾಯಕಿ ಎಂ. ಡಿ ಪಲ್ಲವಿ ಮತ್ತು ಬಳಗದವರಿಂದ ಮೇ. 5 ರಂದು ಸಂಜೆ ಗಾನಾಮೃತ
21 ವಷ೯ಗಳ ನಂತರ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಕಾಯ೯ಕ್ರಮಕ್ಕೆ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.






