ಆರ್ಥಿಕ
SBI ಬ್ಯಾಂಕ್ ನಲ್ಲಿ ಕೋಟ್ಯಾಂತರ ರೂಪಾಯಿ ಹಣ, ಒಡವೆ ದೋಚಿದ ಕಳ್ಳರು!

Views: 155
ಕನ್ನಡ ಕರಾವಳಿ ಸುದ್ದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಕಿಟಕಿಗಳನ್ನು ಮುರಿದು, ಕಳ್ಳರು ಕೋಟ್ಯಂತರ ರೂಪಾಯಿ ಹಣ, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆಯ ನ್ಯಾಮತಿ ಮುಖ್ಯರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕ್ ಶಾಖೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳು ಬ್ಯಾಂಕ್ ಕಿಟಕಿ ಮುರಿದು ಒಳ ನುಗ್ಗಿದ್ದಾರೆ. ಬ್ಯಾಂಕ್ ಒಳಗಡೆ ತಡಕಾಡಿದ್ದು, ಲಾಕರ್ ನಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಕೋಟ್ಯಂತರ ರೂಪಾಯಿ ಹಣ, ಒಡವೆ ಕಳ್ಳತನವಾಗಿರುವ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.