ಶಿಕ್ಷಣ
ಮದರ್ ತೆರೇಸಾಸ್ ಪದವಿಪೂರ್ವ ಕಾಲೇಜಿನ ಸುಜನ್ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

Views: 245
ಶಂಕರನಾರಾಯಣ: ಮೈಸೂರಿನ ಶಾರದಾ ವಿಲಾಸ್ ಶಿಕ್ಷಣ ಸಂಸ್ಥೆಗಳ ಶತಮಾನೋತ್ಸವ ಭವನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಟಿ ಸಿಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು.ಸಿ ವಿಜ್ಞಾನ ವಿಭಾಗದ ಮಾಸ್ಟರ್ ಸುಜನ್ ಶೆಟ್ಟಿ ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಟಿಸಿ ಎಸ್ ಗ್ರಾಮೀಣ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಅತ್ಯಂತ ಪೈಪೋಟಿಯಿಂದ ಕೂಡಿದ ಈ ಸ್ಪರ್ಧೆಯಲ್ಲಿ ಚಾಣಾಕ್ಷತನದಿಂದ ಉತ್ತರಿಸಿ ಆಯ್ಕೆಯಾಗಿರುತ್ತಾನೆ.
ಮಾಹಿತಿ ತಂತ್ರಜ್ಞಾನದಲ್ಲಿ ವಿಶೇಷ ನೈಪುಣ್ಯತೆಯನ್ನು ಹೊಂದಿರುವ ಪ್ರತಿಭಾವಂತ ವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ