ಇತರೆ

ಕುಂದಾಪುರ: ತ್ರಾಸಿ ಬೀಚ್ ಬಳಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು 

Views: 136

ಕುಂದಾಪುರ: ಕಾರು ಹಿಂದಿನಿಂದ ಡಿಕ್ಕಿಯಾಗಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಗಂಭೀರ ಗಾಯಗೊಂಡು ಸಾವನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಬೀಚ್ ಬಳಿ ನಡೆದಿದೆ. ತ್ರಾಸಿ ಕುಪ್ಪ ಮೊಗವೀರ(80) ಸಾವನ್ನಪ್ಪಿದವರು.

ಅವರು ಮನೆಯಿಂದ ತ್ರಾಸಿಯ ಪೇಟೆಗೆ ಹೋಗಿ ವಾಪಾಸು ನಡೆದುಕೊಂಡು ಬರುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕುಪ್ಪ ಮೊಗವೀರ ಅವರನ್ನು ಆಂಬುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಅಪಘಾತದ ಕುರಿತಂತೆ ಕಾರು ಚಾಲಕನ ವಿರುದ್ಧ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!