ಯುವಜನ

BREAKING: ಮೈಸೂರಿನಲ್ಲಿ ಬೆಚ್ಚಿ ಬೀಳಿಸಿದ ಘಟನೆ!..ಯುವತಿಯ ಮೇಲೆ ಗ್ಯಾಂಗ್ ರೇಪ್, ದೂರು ದಾಖಲಿಸಿದ ಯುವತಿ

Views: 325

ಕನ್ನಡ ಕರಾವಳಿ ಸುದ್ದಿ :ಯುವತಿಯ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಡಿಕೇರಿ ಮೂಲದ ಯುವತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿನ್ನೆ ಮಡಿಕೇರಿಯಿಂದ ಬಂದು, ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದೆವು. ಈ ವೇಳೆ ಜೊತೆಗೆ ಇದ್ದಂತಹ ಸ್ನೇಹಿತರೇ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ಇಂದು ಪೊಲೀಸ್ ಠಾಣೆಗೆ ಹಾಜರಾಗಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಆರೋಪಿ ಕೊಡಗು ಮೂಲದವನಾದರೆ, ಇನ್ನೊಬ್ಬ ಮೈಸೂರಿನವನು ಎಂದು ಹೇಳಲಾಗಿದೆ.

ಸಂತ್ರಸ್ತ ಯುವತಿಯು ಮೈಸೂರಿನಲ್ಲಿ ನೆಲೆಸಿದ್ದರಾ? ಅಥವಾ ಮಡಿಕೇರಿಯಿಂದ ಆಕೆಯನ್ನು ಅಪಹರಣ ಮಾಡಿಕೊಂಡು ಮೈಸೂರಿಗೆ ಕರೆತಂದು, ಆರೋಪಿಗಳು ಈ ಹೀನ ಕೃತ್ಯವನ್ನ ಎಸಗಿದ್ದಾರಾ ಅನ್ನೋದರ ಬಗ್ಗೆ ನಿಖರ ಮಾಹಿತಿ ತಿಳಿದು ಬರಬೇಕಿದೆ

ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!