ಇತರೆ
ಅಪ್ರಾಪ್ತೆ ಜೊತೆ ಅಸಭ್ಯವರ್ತನೆ: ಹೆಡ್ ಕಾನ್ಸ್ಟೇಬಲ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Views: 231
ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಹೆಡ್ ಕಾನ್ಸ್ ಟೇಬಲ್ ಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಈ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಹುಬ್ಬಳ್ಳಿ ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಖದೀಮನವರ್ ಬಾಲಕಿಗೆ ಕಿರುಕುಳ ನೀಡಿದ ಆರೋಪಿ. ಬಾಲಕಿಯರನ್ನು ಮನೆಯೊಳಗೆ ಕರೆದ ಖದೀಮನವರ್, ಅನುಚಿತವಾಗಿ ವರ್ತಿಸಿದ್ದಾರೆ ಇದನ್ನು ಕಂಡು ಪೋಷಕರು ಆರೋಪಿಗೆ ಹೊಡೆದಿದ್ದಾರೆ.
ಕೇಶ್ವಾಪುರ ಠಾಣೆ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದೇವೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.






