ಕುಂದಾಪುರ: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ವಂಚಿಸಿದ ಆರೋಪಿಗೆ 20 ವರ್ಷ ಕಠಿಣ ಸಜೆ

Views: 402
ಕುಂದಾಪುರ :ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಮಾಡಿ ವಂಚಿಸಿದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿಣ ಸಜೆ ನೀಡಿದೆ.
17ರ ಹರೆಯದ ಬಾಲಕಿಯನ್ನು ಕಾಲೇಜಿಗೆ ಹೋಗುವಾಗ ಸಂಪರ್ಕಿಸಿದ ಮಿಥುನ್( 21) ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಎಂದು ಗೊತ್ತಾಗಿದೆ.
ಆಕೆಯ ತಂದೆ ನೀಡಿದ ದೂರಿನ ಮೇಲೆ ಕುಂದಾಪುರ ಇನ್ಸ್ಪೆಕ್ಟರ್ ನಂದಕುಮಾರ್ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅಭಿಯೋಜನೆ ಪರ ಸಲ್ಲಿಸಿದ 30 ಸಾಕ್ಷಿಗಳ ಪೈಕಿ 16 ಸಾಕ್ಷಿಗಳನ್ನು ವಿಚಾರಿಸಿ, ವಾದ ಆಲಿಸಿ, ಡಿಎನ್ಎ ಸಾಕ್ಷವನ್ನು ಪರಿಗಣಿಸಿ ಆರೋಪಿ ದೋಷಿ ಎಂದು ತೀರ್ಪು ನೀಡಿದ್ದಾರೆ.
ಅಪರಾಧಿಗೆ 20 ವರ್ಷಗಳ ಶಿಕ್ಷೆ, 21,000 ದಂಡ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ 15000 ಬಾಲಕಿಗೆ, 6000 ಸರಕಾರಕ್ಕೆ ಸಲ್ಲಿಸುವಂತೆಯೂ ನೊಂದ ಬಾಲಕಿಗೆ ಸರಕಾರದಿಂದ 2 ಲಕ್ಷ ರೂಪಾಯಿ ನೀಡುವಂತೆಯೂ ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ವೈಟಿ ರಾಘವೇಂದ್ರ ವಾದಿಸಿದ್ದರು.






