ಶಿಕ್ಷಣ
ಕೋಟ ವಿವೇಕ ಪ.ಪೂ.ಕಾಲೇಜು: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶೋಭಿತ ಪ್ರಥಮ

Views: 50
ಕನ್ನಡ ಕರಾವಳಿ ಸುದ್ದಿ: ಕೋಟ ವಿವೇಕ ಪ.ಪೂ. ಕಾಲೇಜು ಇಲ್ಲಿನ ವಿದ್ಯಾರ್ಥಿ ಶೋಭಿತ ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದಿರುತ್ತಾನೆ.
ಈತನ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ವಿವೇಕ ಪ. ಪೂ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.