ಕರಾವಳಿ

ಕುಂದಾಪುರ:ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ 

Views: 125

ಕುಂದಾಪುರ: ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ, ಹೊತ್ತೊಯ್ದ ಘಟನೆ ಕಟ್ ಬೆಲ್ತೂರು ದೇವಲಕುಂದ ಎಂಬಲ್ಲಿ ನಡೆದಿದೆ.

ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೇವಲಕುಂದ ಗ್ರಾಮದ ಜಾಡಿ ಕ್ರಾಸ್ ಸುಧೀರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.

ಗಾಢ ನಿದ್ದೆಯಲ್ಲಿದ್ದ ನಾಯಿಗೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲಿ ಚಿರತೆ ನಾಯಿಯನ್ನು ಹೊತ್ತುಕೊಂಡು ಕಾಡಿನೊಳಗೆ ಓಡಿ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿರತೆ ಕಾಣಿಸಿಕೊಂಡ ಕಾರಣ ಭಯಗೊಂಡ  ದೇವಲಕುಂದ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ತಕ್ಷಣವೇ ಅಧಿಕಾರಿಗಳು ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Related Articles

Back to top button