ಕರಾವಳಿ
ಮೂಲ್ಕಿ:ಪತ್ನಿ, ಮಗುವನ್ನು ಹತ್ಯೆಗೈದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪತಿ

Views: 491
ಮೂಲ್ಕಿ : ಪತ್ನಿ, ಮಗುವನ್ನು ಹತ್ಯೆಗೈದು ರೈಲಿಗೆ ತಲೆ ಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಕೊಲೆಗೀಡಾದವರು. ಕಾರ್ತಿಕ್ ಭಟ್ (32) ಇಬ್ಬರನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಾತ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.
ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮೂಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪಕ್ಷಿಕೆರೆಯ ಕಾರ್ತಿಕ್ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಮನೆಗೆ ಬಂದಾಗ ಪತ್ನಿ, ಮಗು ಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.






