ಕರಾವಳಿ

ಬ್ರಹ್ಮಾವರ: ಮಹಿಳೆಯನ್ನು ಚುಡಾಯಿಸಿದ ಪ್ರಕರಣ, ವಿಚಾರಣೆಗಾಗಿ ಠಾಣೆಗೆ ಬಂದಿದ್ದ ಆರೋಪಿ ಬಾತ್ ರೂಮಿನಲ್ಲಿ  ಕುಸಿದು ಬಿದ್ದು ಮೃತ್ಯು

Views: 231

ಬ್ರಹ್ಮಾವರ: ಮಹಿಳೆಯನ್ನು ಚುಡಾಯಿಸಿದ ಆರೋಪದಲ್ಲಿ ವಿಚಾರಣೆಗಾಗಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕರೊಬ್ಬರು ಇಂದು ನಸುಕಿನ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಕೇರಳ ರಾಜ್ಯ ಕೊಲ್ಲಂ ಮೂಲದ ಬೀಜು ಮೋಹನ್(42) ಮೃತ ಆರೋಪಿ.

ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದನು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬೀಜು ಮೋಹನ್, ನ.9ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಾಗಿದ್ದ ಮಹಿಳೆಗೆ ಚುಡಾಯಿಸಿದ್ದ ಎಂದು ಆರೋಪಿಸಲಾಗಿದೆ.

ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬೀಜು ಮೋಹನ್‌ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದರು. ಬಳಿಕ ಪೊಲೀಸರುಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ.

ಬೀಜು ಮೋಹನ್‌ನನ್ನು ಸೆಲ್‌ನಲ್ಲಿ ಇರಿಸಿದ್ದು, ನಸುಕಿನ ವೇಳೆ 3.30ರ ಸುಮಾರಿಗೆ ಆತ ಸಮೀಪದ ಬಾತ್‌ರೂಮಿನಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರು ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ಪೊಲೀಸರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

 

Related Articles

Back to top button
error: Content is protected !!