ಇತರೆ

ಸಿಗಂದೂರು ಬಳಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಕಣ್ಮರೆಯಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ

Views: 102

ಕನ್ನಡ ಕರಾವಳಿ ಸುದ್ದಿ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಕಣ್ಮರೆಯಾಗಿದ್ದ ಮೂವರು ಯುವಕರ ಮೃತದೇಹಗಳು ಪತ್ತೆಯಾಗಿವೆ.

ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಊಟ ಮುಗಿಸಿ ಮರಳುವಾಗ ತೆಪ್ಪ ಮಗುಚಿ ಮೂವರು ಯುವಕರು ಕಣ್ಮರೆಯಾಗಿದ್ದರು. ಇನ್ನಿಬ್ಬರು ಈಜಿ ದಡ ಸೇರಿದ್ದರು. ಕಣ್ಮರೆಯಾಗಿದ್ದ ಚೇತನ್‌ (28), ಸಂದೀಪ್‌ (30) ಮತ್ತು ರಾಜೀವ್‌ (34) ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಬುಧವಾರ ನಡೆದ ಘಟನೆಯಲ್ಲಿ ಅಗ್ನಿಶಾಮಕ    ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದರು. ಕತ್ತಲಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹಾಗಾಗಿ ರಾತ್ರಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು

ಮುಳುಗು ತಜ್ಞ ಈಶ್ವರ್‌ ಮಲ್ಪೆ ನೇತೃತ್ವದ ತಂಡ ಗುರುವಾರ ಶರಾವತಿ ಹಿನ್ನೀರಿನಲ್ಲಿ ಶೋಧ ಕಾರ್ಯ ನಡೆಸಿತು. ಹೊಳೆ ಆಳಕ್ಕೆ ತಲುಪಿದ್ದ ಯುವಕರ ಮೃತದೇಹಗಳನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button
error: Content is protected !!