ಬಂಟಕಲ್ ಕಾಲೇಜಿನ ವಿದ್ಯಾರ್ಥಿಗೆ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಪ್ರಧಾನ

Views: 0
ಶ್ರೀಮಧ್ವವಾದಿರಾಜ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿನಿಯಾದ ಶ್ರುತಿ ವಿ. ಭಟ್ ಇವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2023 ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಕರ್ನಾಟಕ ಐಎಸ್‌ಟಿಇ ವತಿಯಿಂದ ನೀಡಲಾಗಿದೆ. ವೆಮನ ತಾಂತ್ರಿಕ ಮಹಾವಿದ್ಯಾಲಯ, ಬೆಂಗಳೂರು ಇಲ್ಲಿ ೦6 ಮೇ 2023 ರಂದು ನಡೆದ 18 ನೇ ಕರ್ನಾಟಕ ರಾಜ್ಯ ಮಟ್ಟದ ಐಎಸ್‌ಟಿಇ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸತತವಾಗಿ ಆರನೇ ಬಾರಿಗೆ ಈ ಪ್ರಶಸ್ತಿಯು ತಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ದೊರಕಿರುವುದಕ್ಕೆ ಸಂಸ್ಥಾಪಕರು ಹಾಗೂ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಶ್ರೀ. ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಕಾರ್ಯದರ್ಶಿಯವರಾದ ಶ್ರೀ ರತ್ನಕುಮಾರ್ ಮತ್ತು ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ರವರು ಹರ್ಷ ವ್ಯಕ್ತಪಡಿಸಿದ್ದಾರೆ.