ಕೃಷಿ

ಮಹಿಳೆ ಮೇಲೆ ದಾಳಿ ಮಾಡಿ ರುಂಡ ಹೊತ್ತೊಯ್ದು ಚಿರತೆ 

Views: 251

ಕನ್ನಡ ಕರಾವಳಿ ಸುದ್ದಿ: ಚಿರತೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕಂಬಾಳು ಗೊಲ್ಲರಹಟ್ಟಿ ಬಳಿ ನಡೆದಿದೆ.

55 ವರ್ಷದ ಕರಿಯಮ್ಮ ಜಮೀನಿಗೆ ತೆರಳಿದ್ದ ವೇಳೆ ಚಿರತೆ ದಾಳಿ ಮಾಡಿ ರಕ್ತವನ್ನು ಹೀರಿ ರುಂಡವನ್ನು ಹೊತ್ತೂಯ್ಡಿದೆ.

ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚುತ್ತಿದ್ದು, ಗ್ರಾಮಸ್ಥರು ಹಲವು ಬಾರಿ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಮುಂದಾಗಿರಲಿಲ್ಲ. ಇದೀಗ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದು, ಎಸಿ ಎಫ್ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಎಸಿಎಫ್ ನಿಜಾಮುದ್ದೀನ್ ಘಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಗ್ರಾಮಸ್ಥರನ್ನು ಸಮಧಾನಪಡಿಸಿದ ಎಸಿಎಫ್, ಚಿರತೆ ಸೆರೆ ಹಿಡಿಯಲಾಗುವುದು. ಮೃತ ಮಹಿಳೆಯ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

 

Related Articles

Back to top button