ಇತರೆ
ಭೀಕರ ಅಪಘಾತ: ಸ್ಥಳದಲ್ಲೆ ತಂದೆ ಹಾಗೂ 2 ವರ್ಷದ ಮಗ ದುರ್ಮರಣ

Views: 184
ಕನ್ನಡ ಕರಾವಳಿ ಸುದ್ದಿ: ಭೀಕರ ಅಪಘಾತದಲ್ಲಿ ತಂದೆ ಹಾಗೂ 2 ವರ್ಷದ ಮಗ ಬಲಿಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ನಿಂತಿದ್ದ ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ. ತಂದೆ ಗುರುರಾಜು (35) ಹಾಗೂ 2 ವರ್ಷದ ಪುತ್ರ ರಿಷಾಂಕ್ ಮೃತರು. ಗುರುರಾಜು ಪತ್ನಿ ಹರ್ಷಿತಾ ಸ್ಥಿತಿ ಗಂಭೀರವಾಗಿದ್ದು, ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗದಗ ಜಿಲ್ಲೆಯ ಮುಂಡರಗಿಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಕಡಬಗೆರೆ ಬ್ರಿಡ್ಜ್ ಬಳಿ ಕಾರು ಮುಂದೆ ನಿಂತಿದ್ದ ಸಿಮೆಂಟ್ ಬಲ್ಕರ್ ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ತಂದೆ ಹಾಗೂ ಮಗ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






