ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲಾ ಕ್ರೀಡೋತ್ಸವ

Views: 138
ಕುಂದಾಪುರ: ದೈಹಿಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಪ್ರಯೋಜನಕಾರಿಯಾಗಿದೆ. ಇದು ಒಬ್ಬ ವ್ಯಕ್ತಿಯ ಸ್ವತ್ತಲ್ಲ ನಿರಂತರ ಪರಿಶ್ರಮ ಮತ್ತು ಪ್ರಯತ್ನದಿಂದ ಗುರಿ ತಲುಪುವಂತಾಗಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ನ.23 ರಂದು ಶನಿವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಪ್ರವರ್ತಿತ ಯಡಾಡಿ- ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಅಂತರಾಷ್ಟ್ರೀಯ ಕ್ರೀಡಾಪಟು ಗುರುರಾಜ ಪೂಜಾರಿ ಅವರು ಭಾಗವಹಿಸಿ, ಸೋತವನು ಒಂದಲ್ಲ ಒಂದು ದಿನ ಗೆದ್ದೇ ಗೆಲ್ಲುತ್ತಾನೆ. ನಿರಂತರ ಪರಿಶ್ರಮದಿಂದ ನಿರ್ದಿಷ್ಟ ಗುರಿಯನ್ನು ತಲುಪಲು ಕ್ರೀಡೆಯಿಂದ ಮಾತ್ರ ಸಾಧ್ಯ ಮತ್ತು ಕರ್ನಾಟಕದಲ್ಲಿ ಶೇ.3ರಷ್ಟು ಉದ್ಯೋಗದಲ್ಲಿ ಕ್ರೀಡಾ ಮೀಸಲಾತಿ ಇದೆ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ಕುಂದಾಪುರ ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕುಸುಮಾಕರ ಶೆಟ್ಟಿ, ಸುಜ್ಞಾನ ಎಜುಕೇಶನ್ ಟ್ರಸ್ಟ್. ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಂಜನ್ ಶೆಟ್ಟಿ, ವಿದ್ಯಾರಣ್ಯ ಶಾಲಾ ಮುಖ್ಯ ಶಿಕ್ಷಕ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ಗುರುರಾಜ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಜಯಲತಾ ವಂದಿಸಿದರು. ಕು.ಶ್ರಾವ್ಯ ಕ್ರೀಡಾ ಪ್ರತಿಜ್ಞೆ ಬೋಧಿಸಿದರು.













