ಸಾಮಾಜಿಕ
ಮದುವೆ ಮುಗಿಸಿ ಬರುವಾಗ ಮರಕ್ಕೆ ಡಿಕ್ಕಿ ಹೊಡೆದ ಕಾರು: ಐವರು ಸಾವು

Views: 128
ಕನ್ನಡ ಕರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನ್ಯೂರಿಯಾ ಪೊಲೀಸ್ ಠಾಣೆಯ ಶೇನ್ ಗುಲ್ ಮ್ಯಾರೇಜ್ ಹಾಲ್ ಬಳಿ ನಡೆದಿದೆ.
ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರು ಉತ್ತರಾಖಂಡದ ಖತಿಮಾ ಜಿಲ್ಲೆಯ ಜಮೂರ್ ಗ್ರಾಮದ ನಿವಾಸಿಗಳು. ವಧುವಿನ ಕಡೆಯ ಸಂಬಂಧಿಕರು ಎನ್ನಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಎರ್ಟಿಗಾ ಕಾರು ಪಲ್ಟಿಯಾಗಿ ಬಿದ್ದು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮರ ಮುರಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಐವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.