ಕರಾವಳಿ

ಕುಂದಾಪುರ ಮುಳ್ಳಿಕಟ್ಟೆ ಸಮೀಪ ಅಪಘಾತ: ಬೈಕ್ ಸವಾರ ಮೃತ್ಯು 

Views: 611

ಕನ್ನಡ ಕರಾವಳಿ ಸುದ್ದಿ: ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ- 66 ಅರಾಟೆ ಸೇತುವೆ ಬಳಿ ಗ್ಯಾಸ್ ಸಾಗಿ ಸುತ್ತಿದ್ದ ವಾಹನ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರು ನಿವಾಸಿ ಯುವರಾಜ ಬಲ್ಲಾಳ್ ಅವರ ಪುತ್ರ ರಂಜಿತ್ ಬಲ್ಲಾಳ್ (59) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ 4 ಗಂಟೆ ಹೊತ್ತಿಗೆ ನಡೆದ ಈ ಅಪಘಾತದಲ್ಲಿ ಬೈಕ್ ಸವಾರ ರಂಜಿತ್ ಬಲ್ಲಾಳ್ ಅವರು ಮಂಗಳೂರು ಕಡೆಗೆ ಪ್ರಯಾಣಿಸುತ್ತಿರುವಾಗ ಗ್ಯಾಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ‌. ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Related Articles

Back to top button