ಶಿಕ್ಷಣ
ಎಸ್.ಎಂ.ಕೃಷ್ಣ ನಿಧನದ ಹಿನ್ನಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಿಕೆ

Views: 27
ಮಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಕೆಲ ತಿಂಗಳಿನಿಂದ ಅಸೌಖ್ಯದಿಂದ ಬಳಲಿತ್ತಿದ್ದು, ಇಂದು (ಡಿ.10) ನಿಧನರಾಗಿದ್ದಾರೆ.
ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ. ಸರ್ಕಾರಿ ರಜೆಯ ಕಾರಣದಿಂದ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವರದಿಯಾಗಿದೆ.