ಕರಾವಳಿ

ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು, ಓರ್ವ ವಿದ್ಯಾರ್ಥಿ ಸಾವು,ಮೂವರ ರಕ್ಷಣೆ,

Views: 289

ಕನ್ನಡ ಕರಾವಳಿ ಸುದ್ದಿ: ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ.  ಕಡಲ ತೀರದಲ್ಲಿ ನಡೆದ ಈ ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ.

ಡಿಸೆಂಬರ್ 10 ರಂದು  ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದೆ.

ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಮುರುಡೇಶ್ವರ ಬೀಚ್ ನಲ್ಲಿ ಮಂಗಳವಾರ ಸಂಜೆ ಮುರ್ಡೇಶ್ವರ ಬೀಚ್ ನಲ್ಲಿ ಆಟವಾಡುತ್ತಿದ್ದಾರೆ. ಈ ವೇಳೆ ಏಕಾಏಕಿ ನಾಲ್ವರು ವಿದ್ಯಾರ್ಥಿಗಳು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಏಳು ಜನ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂರು ಜನ ವಿದ್ಯಾರ್ಥಿನಿಯರಾದ ಯಶೋಧ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಮೃದೇಹವನ್ನು ಹೊರತೆಗೆಯಲಾಗಿದೆ.

ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನ ಅವರನ್ನು ಸಮುದ್ರದಿಂದ ಮೇಲಕ್ಕೆ ಎತ್ತಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!