ಶಿಕ್ಷಣ

ರಾಜ್ಯದಲ್ಲಿ ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು ಸುದ್ದಿಗೆ  ಶಿಕ್ಷಣ ಇಲಾಖೆಯ ಸ್ಪಷ್ಟನೆ ಏನು?

Views: 100

ಬೆಂಗಳೂರು:ರಾಜ್ಯದಲ್ಲಿ ಶಾಲೆಗಳ 2024-25ನೇ ಸಾಲಿನ ಶೈಕ್ಷಣಿಕ ಪ್ರವಾಸ ರದ್ದಾಗಿದೆ ಎನ್ನುವ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಇನ್ನು ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ ಪ್ರವಾಸ ರದ್ದು ಕುರಿತು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ ಎನ್ನಲಾದ ಸಂದೇಶದ ಬಗ್ಗೆ ಸ್ಪಷ್ಟನೆ ಇಲ್ಲಿದೆ

ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಲ ಜಿಲ್ಲಾ ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪ್ರಸ್ತುತ 2024-25ನೇ ಸಾಲಿನಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಕುರಿತು ವಾಟ್ಸಪ್‌ನಲ್ಲಿ ಅಥವಾ ಇತರ ಸಾಮಾಜಿಕ ಜಾಲತಾಣಗಳಲ್ಲಿ ಶೈಕ್ಷಣಿಕ ಪ್ರವಾಸ ರದ್ದು ಮಾಡಿರುವ ಬಗ್ಗೆ ಹಾಗೂ ಈಗಾಗಲೇ ಪ್ರವಾಸ ಹೊರಟಿದ್ದಲ್ಲಿ ಕೂಡಲೇ ಹಿಂದಿರುಗಿ ಬರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೂಚಿಸಿರುವುದಾಗಿ ಸುದ್ದಿ ಹಬ್ಬಿಸುತ್ತಿದ್ದಾರೆ, ಇದು ನಿಜವೇ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸ್ಪಷ್ಟನೆ ನೀಡಿದ ಶಿಕ್ಷಣ ಇಲಾಖೆಯು, 2024-25ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಪ್ರಕ್ಷಣಿಕ ಪ್ರವಾಸ ಮಾಡದಂತೆ ಅಥವಾ ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ ನೀಡಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Related Articles

Back to top button