ಕನ್ನಡ ಜಾನಪದ ಪರಿಷತ್ ಉಡುಪಿ: ಬೈಂದೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ
Views: 33
ಕನ್ನಡ ಕರಾವಳಿ ಸುದ್ದಿ:ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಹಾಗೂ ಕನ್ನಡ ಜಾನಪದ ಪರಿಷತ್ ಬೈಂದೂರು ತಾಲೂಕು ಘಟಕದ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕಂಬದಕೋಣೆ ಬೈಂದೂರು ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 19.12.2024 ರಂದು ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ ಜರುಗಿತು,
ಈ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಗಣೇಶ್ ದೇವಾಡಿಗ ಉಪ್ಪುಂದ ಇವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ನಮ್ಮ ನಾಡಿನ ಕನ್ನಡ ಜಾನಪದ ಸಾಹಿತ್ಯವು ಎಲ್ಲಾ ಸಾಹಿತ್ಯಕ್ಕೆ ತಾಯಿ ಬೇರು ಇದ್ದಹಾಗೆ ಇಂಥ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ನೀಡುವ ಕೆಲಸವು ಇಂದಿನ ವಿದ್ಯಾರ್ಥಿಗಳಿಂದ ಆಗಬೇಕಿದೆ, ಆ ಕುರಿತಾಗಿ ಕನ್ನಡ ಜಾನಪದ ಪರಿಷತ್ತಿನ ರಾಜ್ಯದ್ಯಕ್ಷರಾದ ಡಾ.ಎಸ್ ಬಾಲಾಜಿಯವರು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯದ್ಯಂತ ಸಂಚರಿಸಿ ಜನಪದ ಸಾಹಿತ್ಯ ಹಾಗೂ ಜಾನಪದ ಸಂಸ್ಕೃತಿಯ ಉಳಿವಿಗೆ ಶ್ರಮಿಸುತ್ತಿದ್ದಾರೆ ಅವರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಇಂತಹ ಕಾರ್ಯಕ್ರಮಗಳು ನಡೆಯುತ್ತಿದೆ ಎಂದು ತಿಳಿಸಿದರು,
ಈ ಸಂದರ್ಭದಲ್ಲಿ ಉಪ್ಪುಂದದ ಯಕ್ಷಗಾನದ ಹಿರಿಯ ಕಲಾವಿದರಾದ ಶ್ರೀ ಅಣ್ಣಪ್ಪ ಬಿಜೂರು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಂಶುಪಾಲರಾದ ಶ್ರೀ ಗಣಪತಿ ಅವೃತ ಮತ್ತು ಶ್ರೀ ಟಾಕೇಶ್ ಪಟಗಾರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ 10ನೇ ತರಗತಿಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಾದ ಕುಮಾರಿ ತ್ರಿಷಾ ಹಾಗೂ ಕುಮಾರಿ ಅಪೇಕ್ಷ ಇವರಿಗೆ ನಗದು ಪುರಸ್ಕಾರ ಹಾಗೂ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು, ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀಗಣಪತಿ ಅವೃತ ಹಾಗೂ ಕನ್ನಡ ಶಿಕ್ಷಕರಾದ ಟಾಕೇಶ್ ಪಟಗಾರ ಇವರನ್ನು ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಹಾಗೂ ಬೈಂದೂರು ತಾಲೂಕು ಘಟಕದ ಪರವಾಗಿ ಗೌರವಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀ ಗಣಪತಿ ಅವ್ರತ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಸುಕೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಶ್ರೀಮತಿ ಚಿತ್ರ ಶೆಣೈ ಉಪಸ್ಥಿತರಿದ್ದರು. ಶ್ರೀ ಟಾಕೇಶ್ ಪಟಗಾರ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.