ಕ್ರೀಡೆ
ಬಸ್ರೂರು ಶ್ರೀ ಶಾರದಾ ಪ.ಪೂ ಕಾಲೇಜು:ವಾಲಿಬಾಲ್ ಪಂದ್ಯಾಟದಲ್ಲಿ ವೀವೆಕ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Views: 96
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನೆಡೆಸುವ 2024-25ನೇ ಸಾಲಿನ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಇಲ್ಲಿನ ವಿದ್ಯಾರ್ಥಿ ಶೀ ವೀವೆಕ್ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಡಿಸೆಂಬರ್ 22 ರಿಂದ 26ರ ವರೆಗೆ ತೆಲಂಗಾಣದಲ್ಲಿ ನೆಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ಇವರು ಉತ್ತಮ ಆಲ್ ರೌಂಡರ್ ಆಟಗಾರರಾಗಿದ್ದು, ಉಡುಪಿ ಜಿಲ್ಲೆಯ ಏಕೈಕ ಆಟಗಾರರಾಗಿದ್ದು ಇವರು ಕಾಲೇಜಿನ ದೈಹಿಕ ಶಿಕ್ಷಣ ನಿದೇಶಕರಾದ ಶೀ ಸೂರಜ್ ಕುಮಾರ್ ಶೆಟ್ಟಿ.ಬಿ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದು, ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.