ಇತರೆ

ಎಲ್‌ಪಿಜಿ ಟ್ಯಾಂಕರ್‌ ಮತ್ತು ಇತರ ವಾಹನಗಳಿಗೆ ಡಿಕ್ಕಿಯಾಗಿ ಬೆಂಕಿ 8 ಮಂದಿ ಸಜೀವ ದಹನ

Views: 80

ಕನ್ನಡ ಕರಾವಳಿ ಸುದ್ದಿ:ರಾಜಸ್ತಾನದ ಜೈಪುರ-ಅಜ್ಮೀರ್ ಹೆದ್ದಾರಿಯ ಪೆಟ್ರೋಲ್ ಪಂಪ್ ಬಳಿ ರಾಸಾಯನಿಕ ತುಂಬಿದ ಟ್ರಕ್ ಎಲ್‌ಪಿಜಿ ಟ್ಯಾಂಕರ್ ಮತ್ತು ಇತರ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಭಾರಿ ಬೆಂಕಿ ಕಾಣಿಸಿಕೊಂಡು ಘಟನೆಯಲ್ಲಿ 8 ಮಂದಿ ಸಜೀವ ದಹನವಾಗಿದ್ದಾರೆ.

ಬಸ್ ಜೈಪುರ-ಅಜ್ಮೀರ್ ಹೆದ್ದಾರಿಯನ್ನು ದಾಟುತ್ತಿದ್ದಾಗ, ರಾಸಾಯನಿಕ ತುಂಬಿದ ಟ್ರಕ್ ಎಲ್‌ಪಿಜಿ ಟ್ಯಾಂಕರ್ ಮತ್ತು ಇತರ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಪೆಟ್ರೋಲ್ ಪಂಪ್ ಬಳಿ ಭಾರಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.

ಬಸ್ ನಲ್ಲಿ 40 ಕ್ಕೂ ಹೆಚ್ಚು ಜನರು ಗಂಭೀರವಾದ ಸುಟ್ಟ ಗಾಯಗಳಾಗಿದ್ದು ಸಾವು ಬದುಕಿನ ಜೊತೆ ಹೋರಾಡುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ.

ರಾಜಸ್ಥಾನದ ಭಂಕ್ರೋಟಾ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ 40ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.

ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಭಯ ಮತ್ತು ಅವ್ಯವಸ್ಥೆ ಇತ್ತು ಎಂದು ಶಾಲಾ ವ್ಯಾನ್ ಚಾಲಕರೊಬ್ಬರು ಹೇಳಿದ್ದಾರೆ .

ಸುಮಾರು 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಲಾಯಿತು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೈಪುರದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

Related Articles

Back to top button
error: Content is protected !!