ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯ: ಸಹಕರಿಸದಿದ್ದ ಯುವತಿಯ ಮೇಲೆ ಅತ್ಯಾಚಾರ
Views: 147
ಬೆಂಗಳೂರು:ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರ ನಡೆಸಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳಾಗಿದ್ದಾರೆ, ಇವರಿಬ್ಬರೂ ಪರಸ್ಪರ ಗರ್ಲ್ ಫ್ರೆಂಡ್ಸ್ ಅದಲು ಬದಲು ಮಾಡಿಕೊಂಡು ಸಹಕರಿಸುವಂತೆ ಒತ್ತಾಯಿಸಿದ್ದಕ್ಕೆ ಸಹಕರಿಸದಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದರು.
ನೊಂದ ಯುವತಿ ಕೃತ್ಯದ ಸಂಬಂಧ ಸಿಸಿಬಿಗೆ ದೂರು ನೀಡಿದ್ದು, ಕೂಡಲೇ ಕಾರ್ಯಾಚರಣೆ ಕೈಗೊಂಡ ಪೊಲೀಸರು ಕರಾಳ ದಂಧೆ ನಡೆಸುತ್ತಿದ್ದ ಕಾಮುಕರನ್ನು ಬಂಧಿಸಿದ್ದಾರೆ.
ಆರೋಪಿ ಹರೀಶ್ ಯುವತಿಯನ್ನು ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿಕೊಂಡು ಜೊತೆಯಾಗಿ ಸುತ್ತಾಡಿದ್ದಾರೆ.
ವಾಟ್ಸ್ ಗ್ರೂಪ್ ಮಾಡಿಕೊಂಡಿದ್ದ ‘ಸ್ವಿಂಗರ್ಸ್’ ಟೀಂ, ನಗರದ ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು.ಪಾರ್ಟಿಗೆ ಕಪಲ್ಸ್ ಜೊತೆಗೆ ಆಸಾಮಿಗಳು ತಮ್ಮ ಪ್ರಿಯತಮೆಯರನ್ನು ಪರಸ್ಪರ ಬದಲಾವಣೆ ಮಾಡಿಕೊಳ್ಳುತ್ತಿದ್ದರು ಅಷ್ಟೇ ಅಲ್ಲ ಒಬ್ಬನ ಗರ್ಲ್ ಫ್ರೆಂಡ್ ಜೊತೆಗೆ ಮತ್ತೊಬ್ಬ ಬೆಡ್ ಶೇರ್ ಮಾಡುತ್ತಿದ್ದ. ಇದೇ ರೀತಿ ಯುವತಿಯನ್ನು ಹರೀಶ್ ಎಂಬಾತ ಕೂಪಕ್ಕೆ ದೂಡಿದ್ದ. ಒಪ್ಪದಿದ್ದಾಗ ಸ್ನೇಹಿತರ ಜೊತೆಗೆ ಸೇರಿ ಅತ್ಯಾಚಾರ ಮಾಡಿದ್ದಾನೆ.
ಘಟನೆಯಿಂದ ಬೇಸತ್ತ ಯುವತಿ ದೂರು ಆಧರಿಸಿ ಬಂಧಿತ ಆರೋಪಿಗಳ ಮೊಬೈಲ್ ಪರಿಶೀಲನೆ ವೇಳೆ ಹತ್ತಾರು ಯುವತಿಯರ ಬೆತ್ತಲೆ ಫೋಟೊ ಪತ್ತೆಯಾಗಿವೆ. ಇನ್ನು ಏಕಾಂತದಲ್ಲಿದ್ದ ವಿಡಿಯೋಗಳನ್ನು ಸಹ ಆರೋಪಿಗಳು ರೆಕಾರ್ಡ್? ಮಾಡಿಟ್ಟುಕೊಂಡಿರುವುದು ಪತ್ತೆಯಾಗಿದೆ. ಅದೇ ವೀಡಿಯೋ ತೋರಿಸಿ ಯುವತಿಗೆ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಯಲಾಗಿದ್ದು,
ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.