ಕರಾವಳಿ

ತ್ರಾಸಿ ಕಡಲ ಕಿನಾರೆಯಲ್ಲಿ ಟೂರಿಸ್ಟ್ ಬೋಟ್ ಮಗುಚಿ ರೈಡರ್ ನಾಪತ್ತೆ, ಪ್ರವಾಸಿಗ ಬಚಾವ್ 

Views: 147

ಕನ್ನಡ ಕರಾವಳಿ ಸುದ್ದಿ: ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಬೋಟ್ ರೈಡರ್ ನಾಪತ್ತೆಯಾದ ಘಟನೆ ಕುಂದಾಪುರ ಸಮೀಪದ ತ್ರಾಸಿ ಕಡಲ ಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಅವರನ್ನು ರಕ್ಷಿಸಲಾಗಿದೆ.

ಬಚಾವ್ ಆದ ಪ್ರಶಾಂತ್ 

ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ  ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಿ ಕರೆತರಲಾಗಿದೆ. ರೈಡ್ ಮಾಡುತ್ತಿದ್ದ ರೋಹಿದಾಸ್ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.

ನಾಪತ್ತೆಯಾದ ರೋಹಿದಾಸ್ ಅಲಿಯಾಸ್ ರವಿ

ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ಅಲಿಯಾಸ್ ರವಿ ಕುಟುಂಬದೊಂದಿಗೆ ತ್ರಾಸಿಯಲ್ಲಿ ವಾಸಿಸುತ್ತಿದ್ದರು.

ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related Articles

Back to top button
error: Content is protected !!