ಶಿಕ್ಷಣ
ಕೋಟ ವಿವೇಕ ಪದವಿ ಪೂರ್ವ ಕಾಲೇಜು:ಗ್ರಾಹಕರ ಹಕ್ಕು ಮಾಹಿತಿ ಕಾರ್ಯಕ್ರಮ
Views: 22
ಕನ್ನಡ ಕರಾವಳಿ ಸುದ್ದಿ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಗ್ರಾಹಕರ ಹಕ್ಕು ಕಾಯ್ದೆ ರಕ್ಷಣೆಯ ಬಗ್ಗೆ ಮಾಹಿತಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಅಖಿಲ ಭಾರತೀಯ ಗ್ರಾಹಕ್ ಪಂಚಾಯತ್ ಕರ್ನಾಟಕ ಪ್ರಾಂತ್ಯ ಇದರ ಅಧ್ಯಕ್ಷರಾದ ನರಸಿಂಹ ನಕ್ಷತ್ರಿ ಕಾರ್ಕಡ ಇವರು ಆಗಮಿಸಿ ಮಕ್ಕಳಿಗೆ ಗ್ರಾಹಕರ ಹಕ್ಕು ಕಾಯ್ದೆ ಇದರ ಕುರಿತಾಗಿ ಮಾಹಿತಿ ನೀಡುತ್ತಾ ಗ್ರಾಹಕರು ತಮಗೆ ಆದ ಮೋಸ, ಅನ್ಯಾಯ ಇದರ ವಿರುದ್ಧ ಹೇಗೆ ಹೋರಾಡಬೇಕು ಎಂದು ತಿಳಿಸಿ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.
ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಜಗದೀಶ ನಾವಡ ರು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಬಾಲಿಕಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಜಗದೀಶ್ ಹೊಳ್ಳರವರು ಉಪಸ್ಥಿತರಿದ್ದರು.
ಉಪನ್ಯಾಸಕ ಶ್ರೀ ಅಮಿತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.