ಕರಾವಳಿ

ಶಾಲಾ ವಾರ್ಷಿಕೋತ್ಸವಕ್ಕೆ ತೆರಳಿದ್ದ ಯುವತಿಯ ಮೇಲೆ ಅತ್ಯಾಚಾರ

Views: 210

ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ  ವರದಿಯಾಗಿದೆ.

ಅತ್ಯಾಚಾರ ಆರೋಪಿ ಜಯಂತ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಳು.

ಇದೀಗ ಗ್ರಾಮಾಂತರ ಎಸ್.ಐ.ಹರೀಶ್ ಅವರ ಪೋಲೀಸ್ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related Articles

Back to top button