ಸಾಂಸ್ಕೃತಿಕ
ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ “ಸರಸ್ವತಿ ಸಾಧಕ ಸಿರಿ” ರಾಷ್ಟ್ರ ಪ್ರಶಸ್ತಿಗೆ ಆಯ್ಕೆ

Views: 210
ಕನ್ನಡ ಕರಾವಳಿ ಸುದ್ದಿ: ಉತ್ತಮ ಸಂಘಟಕಿ, ಸಮಾಜ ಸೇವಕಿ ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ತಾಲೂಕು ಘಟಕದ ಸಂಚಾಲರಾದ ಶ್ರೀಮತಿ ಪ್ರಭಾ.ಕೆ ರಾವ್ ಕಲ್ಯಾಣಪುರ, ಉಡುಪಿ ಇವರ ಉತ್ತಮ ಸಾಧನೆಯನ್ನು ಗುರುತಿಸಿ, ದಾವಣಗೆರೆಯ ಸಾಲಿಗ್ರಾಮ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ 70ನೇ ವರ್ಷದ ಕನ್ನಡ ನಿತ್ಯೋತ್ಸವದ ಅಂಗವಾಗಿ ನೀಡುವ 2025 ನೇ ಸಾಲಿನ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ,
2025 ಏಪ್ರಿಲ್ 27 ರಂದು ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ






