ಶಿಕ್ಷಣ

ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ 

Views: 50

ಕನ್ನಡ ಕರಾವಳಿ ಸುದ್ದಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಕುಂದಾಪುರ ಇವರ ವತಿಯಿಂದ ಎಸ್ ಎಸ್ ಎಲ್ ಸಿ 2024 -25 ನೇ ಸಾಲಿನ ಮಧ್ಯಾವಧಿ ಪರೀಕ್ಷೆಯಲ್ಲಿ NC ಪಡೆದ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರವನ್ನು ಡಿ.23ರಂದು ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ನಡೆಯಿತು.

ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶ್ರೀಯುತ ಸಂತೋಷ್ ಶೆಟ್ಟಿ ಅವರು ವಹಿಸಿದ್ದರು. ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ ಬಿ ಆರ್ ಸಿ ಕುಂದಾಪುರ, ಶ್ರೀಯುತ ಜಯಶೀಲ ಶೆಟ್ಟಿ ಅನುದಾನಿತ ಪ್ರೌಢಶಾಲೆಗಳ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.

ಶ್ರೀಮತಿ ರೇಖಾ ಗಣಿತ ಶಿಕ್ಷಕಿ ಸರ್ಕಾರಿ ಪ್ರೌಢಶಾಲೆ ಬಸ್ರೂರು, ಶ್ರೀ ಸಂತೋಷ್ ವಿಜ್ಞಾನ ಶಿಕ್ಷಕರು ಬ್ಯಾರಿಸ್ ಸ್ಕೂಲ್ ಕೋಡಿ ಬ್ಯಾರಿಸ್,ಪ್ರದೀಪ್ ಕುಮಾರ್ ಶೆಟ್ಟಿ ಸಮಾಜ ವಿಜ್ಞಾನ ಶಿಕ್ಷಕರು ನಿವೇದಿತಾ ಪ್ರೌಢಶಾಲೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆಯಾ ವಿಷಯದ ಕುರಿತಾಗಿ ಮಾಹಿತಿ ನೀಡಿದರು.

ಶ್ರೀಯುತ ಸಂತೋಷ್ ಶೆಟ್ಟಿ ಬಿಆರ್ ಸಿ ಕುಂದಾಪುರ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಉತ್ಸಾಹದ ಮಾತುಗಳ ಮಾತುಗಳನ್ನಾಡಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವಂತೆ ಹುರಿದುಂಬಿಸಿದರು . ಶ್ರೀಯುತ ಜಯಶೀಲ ಶೆಟ್ಟಿ ಅವರು ಮಾತನಾಡಿ ‘ಸೋಲೇ ಗೆಲುವಿನ ಸೋಪಾನ ಸೋತವನು ಕೈಕಟ್ಟಿ ಕುಳಿತರೆ ಗೆಲ್ಲುವುದು ಅಸಾಧ್ಯ ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವನ್ನು ಸಾಧಿಸಿ’ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳನ್ನು ನೀಡಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಶ್ರೀಯುತ ಸಂತೋಷ್ ಶೆಟ್ಟಿ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಧಿಸುವ ಛಲ ಧೈರ್ಯ, ನಂಬಿಕೆ ಇರಬೇಕೆಂದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು.

ಕಾರ್ಯಕ್ರಮಕ್ಕೆ ಕುಂದಾಪುರ ವೃತ್ತದ ಸುಮಾರು 14 ಶಾಲೆಯ 120ಕ್ಕೂ ಹೆಚ್ಚು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಶೈಕ್ಷಣಿಕ ನಿರ್ದೇಶಕರಾದ ಶ್ರೀಯುತ ಪ್ರಕಾಶ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶ್ರೀಮತಿ ಅನಿತಾ ಕಾರ್ಯಕ್ರಮ ನಿರೂಪಿಸಿ , ಸಹ ಶಿಕ್ಷಕಿ ಶಿಕ್ಷಕಿ ನಾಗಶ್ರೀ ವಂದನಾರ್ಪಣೆ ಗೈದರು.

Related Articles

Back to top button
error: Content is protected !!