‘ಗ್ಯಾರಂಟಿ’ ಈಡೇರಿಸಲು ಕಾಂಗ್ರೆಸ್ ಕುಟುಂಬವಾಗಿ ಕೆಲಸ ಮಾಡಲಿದೆ: ಸಿದ್ದರಾಮಯ್ಯ

Views: 0
ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಸಹಿತ ಯಾವುದೇ ಯೋಜನೆಗಳನ್ನು ಜಾರಿಗೆ ತರುವುದು ಸುಲಭವಲ್ಲ ಅವರ ಯೋಜನೆಗಳಿಗೆ 60 ರಿಂದ 70 ಸಾವಿರ ಕೋಟಿ ರೂಪಾಯಿ ಬೇಕು. ಅಷ್ಟು ಮೊತ್ತವನ್ನು ಎಲ್ಲಿಂದ ತರುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಮತ್ತು ಆ ಐದು ಗ್ಯಾರಂಟಿಗಳನ್ನು ಈಡೇರಿಸಬೇಕೆಂದು ರಾಜ್ಯಾದ್ಯಂತ ಜನ ಸಾಮಾನ್ಯರ ಕೂಗು ಜೋರಾಗುತ್ತಿದ್ದಂತೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರಂಟಿ ಘೋಷಣೆಗಳ ಬಗ್ಗೆ ಕಾಂಗ್ರೆಸ್ ನಾಯಕರು ಭರವಸೆಯ ಮಾತನಾಡಿದ್ದಾರೆ.
ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕನ್ನಡಿಗರ ಹಿತರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದಶ೯ಕ, ಬ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷವು ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದರು.
ಎಐಸಿಸಿ ಪ್ರಧಾನ ಕಾಯ೯ದಶಿ೯ ಕೆ.ಸಿ. ವೇಣುಗೋಪಾಲ ಮಾತನಾಡಿ, ಕನಾ೯ಟಕದ ಜನತೆ ಕಾಂಗ್ರೆಸ್ ಗೆ ಸಂಪೂಣ೯ ಗೆಲುವು ಕೊಟ್ಟಿದ್ದು, ನಾವು ಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದರು.






