ಇತರೆ

ಹಾವೇರಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :ಒಂದೇ ಕುಟುಂಬದ ನಾಲ್ವರ ದುರ್ಮರಣ

Views: 159

ಹಾವೇರಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ಶಿಗ್ಗಾಂವಿ ಬಳಿಯ ತಡಸ ಕ್ರಾಸ್‌‍ನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಬೆಂಗಳೂರಿನ ಚಾಮರಾಜಪೇಟೆ ನಿವಾಸಿ ಚಂದ್ರಮ (59) ಮತ್ತು ರಾಜರಾಜೇಶ್ವರಿ ನಗರದಲ್ಲಿ ವಾಸವಾಗಿದ್ದ ಅವರ ಮಗಳು ಮೀನಾ (38), ಅಳಿಯ ಮಹೇಶ್‌ ಕುಮಾರ್‌ (41) ಹಾಗೂ ಮೊಮ್ಮಗ ಧನ್ವೀರ್‌ (11) ಎಂದು ಗುರುತಿಸಲಾಗಿದೆ.

ಬೆಂಗಳೂರು-ಪುಣೆ ಹೆದ್ದಾರಿಯ ತಿಮಾಪುರ ಗ್ರಾಮದ ಬಳಿ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಎಸ್‌‍ಯುವಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಹುಬ್ಬಳ್ಳಿಯ ಕಿಮ್ಸ್‌‍ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

 

Related Articles

Back to top button
error: Content is protected !!