ಯುವಜನ
ಮೊಬೈಲ್ ಹೆಚ್ಚು ಬಳಸಬೇಡ ಓದಿನ ಕಡೆ ಗಮನ ಕೊಡು ಎಂದಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Views: 132
ಕನ್ನಡ ಕರಾವಳಿ ಸುದ್ದಿ: ಮೊಬೈಲ್ ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಆಕೆ ಶಿವಮೊಗ್ಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಳು. ಇದನ್ನು ಗಮನಿಸಿದ್ದ ಪೋಷಕರು ಮೊಬೈಲ್ ಹೆಚ್ಚು ಬಳಸಬೇಡ, ಓದಿನ ಕಡೆ ಗಮನ ಕೊಡು ಎಂದು ಬುದ್ಧಿ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಯುವತಿ ಕಳೆದ 3 ದಿನದ ಹಿಂದೆ ಮನೆಯಲ್ಲಿ ವಿಷ ಸೇವಿಸಿದ್ದಳು. ವಿಷ ಸೇವಿಸಿದ್ದ ಯುವತಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಗುರುವಾರ) ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






