ಹೆಣ್ಣು ಮಕ್ಕಳೊಂದಿಗೆ ಅಕ್ರಮ ಸಂಬಂಧ ಆರೋಪ:ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ-ವ್ಯಕ್ತಿ ಸಾವು

Views: 29
ಕನ್ನಡ ಕರಾವಳಿ ಸುದ್ದಿ: ಹೆಣ್ಣು ಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ವ್ಯಕ್ತಿಯೋರ್ವನಿಗೆ ಲೈಟ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಘಟನೆ ಹಾನಗಲ್ ತಾಲೂಕಿನಲ್ಲಿ ನಡೆದಿದೆ.ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ.
ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಅಲ್ಲದೇ, ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ.
ಏನಿದು ಘಟನೆ : ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಂದ ಆರೋಪಿತರು ತಮ್ಮ ಮನೆಯ ಹೆಣ್ಣು ಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅವಾಚ್ಯವಾಗಿ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ನನ್ನ ಸಹೋದರ ಪ್ರಕಾಶ್, ಈ ರೀತಿ ಆರೋಪ ಮಾಡುವುದು ಸರಿಯಲ್ಲ, ನನಗೆ ಅವಳೊಂದಿಗೆ ಅನೈತಿಕ ಸಂಬಂಧ ಇಲ್ಲ ಎಂದಿದ್ದಾನೆ. ಆದರೆ ಕೋಪಗೊಂಡ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಪ್ರಕಾಶನನ್ನು ಹಾನಗಲ್ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ” ಎಂದು ಮೃತನ ಸಹೋದರ ಫಕ್ಕೀರೇಶ ದೂರಿನಲ್ಲಿ ಉಲ್ಲೇಖಿಸಿದ್ದಾರೆ.7 ಮಂದಿ ಆರೊಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.






