ಶಿಕ್ಷಣ

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ 

Views: 209

ಕನ್ನಡ ಕರಾವಳಿ ಸುದ್ದಿ: ಕಳೆದ ಎರಡೂವರೆ ದಶಕಗಳಿಂದ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಹತ್ತು ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದು ಪ್ರಸ್ತುತ ಮದರ್ ತೆರೇಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ, ಕುಂದಾಪುರ ತಾಲೂಕಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿರುವ ಶ್ರೀ ರವಿದಾಸ್ ಶೆಟ್ಟಿ ಇವರ ನಿಷ್ಠಾವಂತ,ಸರಳ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಎಷಿಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಕೊಯಂಬತ್ತೂರು  ತಮಿಳುನಾಡಿನ ಹೊಸೂರು ಕ್ಲಾಸ್ಟಾ ಹಿಲ್ಸ್ ನಲ್ಲಿ ನಡೆದ ಘಟಿಕೋತ್ಸವದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು 28ನೇ ಡಿಸೆಂಬರ್, 2024 ರಂದು ಪ್ರದಾನಮಾಡಲಾಯಿತು.

ಈ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದ ಮುಖ್ಯಶಿಕ್ಷಕರನ್ನು ಸಂಸ್ಥೆಯ ಆಡಳಿತಮಂಡಳಿಯ ಅಧಿಕಾರಿದ್ವಯರಾದ ಕುಮಾರಿ ಶಮಿತಾ ರಾವ್ ಮತ್ತು ಕುಮಾರಿ ರೆನಿಟಾ ಲೋಬೊ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭಾಶಯಗಳನ್ನು ಕೋರಿರುತ್ತಾರೆ.

 

Related Articles

Back to top button
error: Content is protected !!